1 ಸಮುವೇಲನು 12:1-25 Bro/Samuel/Bible/@KannadaBible103

  Рет қаралды 61

KannadaBible103

KannadaBible103

Күн бұрын

1 ಸಮುವೇಲನು 12:1-25 Bro/Samuel/Bible/@KannadaBible103
ಸಮುವೇಲನು ಉದ್ಯೋಗನಿವೃತ್ತನಾಗುವಾಗ ಇಸ್ರಾಯೇಲ್ಯರಿಗೆ ಹೇಳಿದ ಮಾತುಗಳು
121 ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ✽ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ✽ ಅರಸನನ್ನು ನೇವಿುಸಿದೆನು.
2 ✝ಇನ್ನು ಮುಂದೆ ಇವನೇ ನಿಮ್ಮನ್ನು ನಡಿಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.
3 ✽ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -
4 ✽ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ ನಮ್ಮಿಂದ ಏನಾದರೂ ಕಸಕೊಂಡದ್ದಾಗಲಿ ಇರುವದಿಲ್ಲ ಎಂದು ಉತ್ತರಕೊಟ್ಟರು.
5 ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ✽ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು.
6 ✽ಆಗ ಸಮುವೇಲನು - ನಿಮ್ಮ ಪಿತೃಗಳನ್ನು ಐಗುಪ್ತದಿಂದ ಕರತರುವದಕ್ಕಾಗಿ ಮೋಶೆ ಆರೋನರನ್ನು ಏರ್ಪಡಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.
7 ✝ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ ನಿಮ್ಮ ಪಿತೃಗಳಿಗೋಸ್ಕರವೂ ನಡಿಸಿದ ನೀತಿಕಾರ್ಯಗಳನ್ನು ಕುರಿತು ಆತನೆದುರಿನಲ್ಲಿ ನಿಮಗೆ ನೆನಪು ಹುಟ್ಟಿಸಿ ನಿಮ್ಮನ್ನು ಎಚ್ಚರಿಸುತ್ತೇನೆ.
8 ✝ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.
9 ✽ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು✽ ಆತನು ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್‍ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.
10 ✝ಆಗ ಅವರು ಆತನಿಗೆ - ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು ಎಂದು ಮೊರೆಯಿಟ್ಟರು.
11 ✝ಯೆಹೋವನು ಯೆರುಬ್ಬಾಳ್,✽ ಬಾರಾಕ್,✽ ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.
12 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ✽ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.
13 ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.
14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ✽ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.
15 ನೀವು ಯೆಹೋವನ ಮಾತನ್ನು ಕೇಳದೆಯೂ ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ ಆತನ ಹಸ್ತವು ನಿಮ್ಮ ಹಿರಿಯರಿಗೆ✽ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವದು.
16 ✽ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.
17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು
18 ಆತನು ಗುಡುಗು ಮಳೆಗಳನ್ನು ಕಳುಹಿಸಿದನು.✽ ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ✽ ಬಹಳವಾಗಿ ಭಯಪಟ್ಟು ಸಮುವೇಲನನ್ನು -
19 ✽ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -
20 ಭಯಪಡಬೇಡಿರಿ;✽ ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
21 ✝ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.
22 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ✽ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ✽ ನಿಮ್ಮನ್ನು ಕೈಬಿಡುವದೇ ಇಲ್ಲ.
23 ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು✽ ಬಿಡುವದೇ ಇಲ್ಲ;✽ ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
24 ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು✽ ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು✽ ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
25 ✝ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನೊಡನೆ ನಾಶವಾಗುವಿರಿ ಎಂದು ಹೇಳಿದನು.

Пікірлер
Увеличили моцареллу для @Lorenzo.bagnati
00:48
Кушать Хочу
Рет қаралды 8 МЛН
Can You Find Hulk's True Love? Real vs Fake Girlfriend Challenge | Roblox 3D
00:24
風船をキャッチしろ!🎈 Balloon catch Challenges
00:57
はじめしゃちょー(hajime)
Рет қаралды 100 МЛН
I take cabbage and 3 eggs. This recipe will drive you crazy! Family recipe!
18:24
Get Deep Sleep and Cure Your Insomnia Disease with Beautiful Quran ✦ NOOR
1:10:29
THE MOST POWERFUL RUQYAH REMOVES Djinn IN THE HUMAN BODY AND BLOODSTREAM
1:40:25
حکایت چهار پند خر : داستان اموزنده از مثنوی معنوی
20:49
حکایت های پند آموز
Рет қаралды 798 М.