Рет қаралды 4,857,166
Wonderful depiction of Lord Sri Rama and his character
Lyrics by Dr. Gajanana Sharma
Music by Sri Saaket Sharma
Video conceptualisation
Music Arrangement
Home Recording
Editing & Mastering
Singing by
M R Shree Harsha.
Official Website:: www.harshadhwan...
Facebook Page :: / shreeharshaofficial
Instagram :: / harshadhwani_shreeharsha
Twitter :: / harshadhwani
SoundCloud :: / shree-harsha-singer
This happens to be anthem song of Sri Ramachandrapura Mutt, Hosanagara as per details shared by Sri Gajanana Sharma.
We humbly dedicate this song at holy feet of deity Sri Ramachandra Swamy of Sri Ramachandrapura mutt, Hosanagara, Karnataka.
Lyrics in Kannada :
ರಾಮಾ..ರಾಮಾ ರಾಮಾ...ರಾಮಾ..
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|
ನಿನ್ನಷ್ಟು ನೆಮ್ಮದಿಯು ಎಲ್ಲಿಹುದು ರಾಮ ||
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ||
ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ|
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ|
ಕಷ್ಟಗಳ ಕೊಡಬೇಡ ಎನಲಾರೆ ರಾಮ|
ಕಷ್ಟ ಸಹಿಸುವ ಸಹನೆ ಕೊಡು ಎನಗೆ ರಾಮ|
ಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮ|
ಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮ ||
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|
ನಿನ್ನಷ್ಟು ನೆಮ್ಮದಿಯು ಎಲ್ಲಿಹುದು ರಾಮ ||
ರಾಮಾ..ರಾಮಾ ರಾಮಾ...ರಾಮಾ..
ಒಳಿತಿನೆಡೆ ಮುನ್ನಡೆವ ಮನವ ಕೊಡು ರಾಮ|
ಸೆಳೆತಕ್ಕೆ ಸಿಗದಂತ ಸ್ಥಿರತೆ ಕೊಡು ರಾಮ|
ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ|
ನಾಳೆಗಳು ಪುಣ್ಯಗಳ ಹಾದಿಯಾಗಲಿ ರಾಮ|
ನನ್ನ ಬಾಳಿಗೆ ನಿನ್ನ ಹಸಿವ ಕೊಡು ರಾಮ|
ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ|
ಕಣ್ಣು ಕಳೆದರು ನಿನ್ನ ಕನಸ ಕೊಡು ರಾಮ|
ನನ್ನ ಹರಣಕೆ ನಿನ್ನ ಚರಣ ಕೊಡು ರಾಮ ||
ರಾಮಾ..ರಾಮಾ ರಾಮಾ...ರಾಮಾ..
ಕೌಸಲ್ಯೆಯಾಗುವೆನು ಮಡಿಲಲಿರು ರಾಮ|
ವೈದೇಹಿಯಾಗುವೆನು ಒಡನಾಡು ರಾಮ|
ಪಾದುಕೆಯ ತಲೆಯಲಿಡು ಭರತನಾಗುವೆ ರಾಮ|
ಸಹವಾಸ ಕೊಡು ನಾನು ಸೌಮಿತ್ರಿ ರಾಮ|
ಸುಗ್ರೀವನಾಗುವೆನು ಸ್ನೇಹ ಕೊಡು ರಾಮ|
ಹನುಮನಾಗುವೆ ನಿನ್ನ ಸೇವೆ ಕೊಡು ರಾಮ|
ಶಬರಿಯಾಗುವೆ ನಿನ್ನ ಭಾವ ಕೊಡು ರಾಮ ||
ರಾಮಾ..ರಾಮಾ ರಾಮಾ...ರಾಮಾ..
ಮಡಿಲಲ್ಲಿ ಮರಣ ಕೊಡು ನಾ ಜಟಾಯುವು ರಾಮ|
ಮುಡಿಯಲ್ಲಿ ಅಡಿಯನಿಡು ನಾ ಅಹಲ್ಯೆಯು ರಾಮ|
ನಾ ವಿಭೀಷಣ ಶರಣುಭಾವ ಕೊಡು ರಾಮ|
ನನ್ನೊಳಿಹ ರಾವಣಗೆ ಸಾವ ಕೊಡು ರಾಮ|
ಕಣ್ಣೀರ ಕರೆಯುವೆನು ನನ್ನತನ ಕಳೆ ರಾಮ|
ನಿನ್ನೊಳಗೆ ಕರಗುವೆನು ನಿರ್ಮೋಹ ಕೊಡು ರಾಮ ||
ರಾಮಾ..ರಾಮಾ ರಾಮಾ...ರಾಮಾ..
ಋತ ನೀನೆ ಋತು ನೀನೆ ಶ್ರುತಿ ನೀನೆ ರಾಮ|
ಮತಿ ನೀನೆ ಗತಿ ನೀನೆ ದ್ಯುತಿ ನೀನೆ ರಾಮ|
ಆರಂಭ ಅಸ್ತಿತ್ವ ಅಂತ್ಯ ನೀ ರಾಮ|
ಪೂರ್ಣ ನೀ ಪ್ರಕಟ ನೀ ಆನಂದ ರಾಮ|
ಹರ ನೀನೆ ಹರಿ ನೀನೆ ಬ್ರಹ್ಮ ನೀ ರಾಮ|
ಗುರಿ ನೀನೆ ಗುರು ನೀನೆ ಅರಿವು ನೀ ರಾಮ|
ರಘುರಾಮ ರಘುರಾಮ ರಘುರಾಮ ರಾಮ|
ನಗು ರಾಮ ನಗ ರಾಮ ಜಗ ರಾಮ ರಾಮ ||
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|
ನಿನ್ನಷ್ಟು ನೆಮ್ಮದಿಯು ಎಲ್ಲಿಹುದು ರಾಮ ||
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ||
ರಾಮಾ..ರಾಮಾ ರಾಮಾ...ರಾಮಾ..
~~~~