Рет қаралды 123
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ
ಕೊಳ್ಳೇಗಾಲ. ಪಟ್ಟಣದ ಒಕ್ಕಲಿಗರ ಸಂಘ ಜಿ.ವಿ ಗೌಡ ಸ್ಮಾರಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಡಿಇಡಿ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನ ದ ಅಡಿಯಲ್ಲಿ ನಾವು ವ್ಯಾಸಂಗ ಮಾಡುತ್ತಿದ್ದೇವೆ. ಅವರು ಹಾಕಿಕೊಟ್ಟ ಮಾರ್ಗ ದರ್ಶನದಲ್ಲಿ ನಡೆಯಬೇಕಿದೆ.
ಜಿ. ವಿ. ಗೌಡ ಸ್ಮಾರಕ ವಿದ್ಯಾ ಸಂಸ್ಥೆಯು ಆಯೋಜಿಸಿರುವ ವಾರ್ಷಿಕೋತ್ಸವದಲ್ಲಿ ಕಾರ್ಯಕ್ರಮ ದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ತರುವ ವಿಷಯವಾಗಿದೆ.
ಇಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ಚೆನ್ನಾಗಿ ಓದಿ ಮುಂದೇಬರಬೇಕು ನಿಮ್ಮ ಪೋಷಕರುಗಳ ಜನ್ಮ ಸಾರ್ಥಕ ಪಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಂತರ ಹನೂರು ವಿಧಾನ ಸಭಾ ಕ್ಷೆತ್ರದ ಮಾಜಿ ಶಾಸಕ ಆರ್. ನರೇಂದ್ರ ರವರು ಮಾತನಾಡಿ ಈ ಕಾರ್ಯಕ್ರಮಮಕ್ಕೆ ಆಗಮಿಸಿರುವ ಕೊಳ್ಳೇಗಾಲ ಕ್ಷೇತ್ರದ ಶಾಸಕ ರಾದ ಎ.ಆರ್. ಕೃಷ್ಣ ಮೂರ್ತಿ ಯವರ ಅನುದಾನ ದಿಂದ 10. ಲಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜೇಶ್ ಗೌಡ ರವರ ಅನುದಾನದಿಂದ 3. ಕಂತಿನಲ್ಲಿ ಐದೈದು ಲಕ್ಷ ದಂತೆ 15. ಲಕ್ಷ. ಹಾಗೂ ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ ರವರ ಅನುದಾನ ದಿಂದ 10. ಲಕ್ಷ. ಅನುದಾನವನ್ನು ಕೊಡಲು ಒಪ್ಪಿಕೊಂಡಿರುತ್ತಾರೆ.
ಈ ಅನುದಾನವನ್ನು ನಮ್ಮ ಸಂಸ್ಥೆ ಯ ಶಾಲಾ ಕಾಲೇಜು ಗಳ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಉಪಯೋಗಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ನಂತರ
ಹೆಚ್ಚು ಅಂಕ ಪಡೆದ ಪಿಯುಸಿ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ವಿವಿಧ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಡಾ.ತಿಮ್ಮಯ್ಯ, ಗೌರವಧ್ಯಕ್ಷರು ಮತ್ತು ಮಾಜಿ ಶಾಸಕ ಆರ್.ನರೇಂದ್ರ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಅಧ್ಯಕ್ಷರು ಗಂಗಾಧರ್, ಜಿಲ್ಲಾ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ರಾಚಯ್ಯ, ಒಕ್ಕಲಿಗರ ಸಂಘದ ಅಧ್ಯಕ್ಷರು ಕೆ.ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲಿಂಗೇಗೌಡ, ಪ್ರಿನ್ಸಿಪಾಲರದ ಶ್ಯೆಲಿನಿ, ಹಾಗೂ ನಿರ್ದೇಶಕರು, ಶಾಲಾ ಮಕ್ಕಳು, ಶಿಕ್ಷಕರು, ಪೋಷಕರು ಇದ್ದರು.