ರಮೇಶ್ ಜಾರಕಿಹೊಳಿ ಬಗ್ಗೆ ಬಿಎಸ್‍ವೈ ಅನುಕಂಪ; ಸಂಜೆವರೆಗೆ ಸಾಕಷ್ಟು ಬದಲಾವಣೆಯಾಗಲಿದೆ: ಬಿಎಸ್‍ವೈ ಭವಿಷ್ಯ

  Рет қаралды 146,158

Public TV

Public TV

Күн бұрын

ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಯನ್ನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಕೈಬಿಟ್ಟಿದ್ದು ಸಾಕಷ್ಟು ದೊಡ್ಡ ಪರಿಣಾಮ ಬೀರಲಿದೆ. ಇಂದು ಸಂಜೆವರೆಗೆ ಕಾದು ನೋಡೋಣಾ. ಸಂಜೆವರೆಗೆ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಷಕ ಬಿಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಅತೃಪ್ತಿ ತಾಂಡವವಾಡುತ್ತಿತ್ತು. ಹಾಗಾಗಿ ಕಳೆದ ಮೂರು ತಿಂಗಳಿಂದ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿ ಕಾಲಹರಣ ಮಾಡಿಕೊಂಡು ಬಂದ್ರು. ರೈತರ ಸಾಲಮನ್ನಾ ಎಂದು ಹೇಳುತ್ತಾ ಕುಮಾರಸ್ವಾಮಿ ರೈತರಿಗೆ ಟೋಪಿ ಹಾಕುತ್ತಾ ಬಂದಿದ್ದಾರೆ. ಈಗ ಸಂಪುಟ ವಿಸ್ತರಣೆ ಕೊನೆಯ ಹಂತ ತಲುಪಿದೆ. ಆದರೂ ಸಣ್ಣಪುಟ್ಟ ವ್ಯತ್ಯಾಸಗಳು ಕಂಡು ಬರುತ್ತಿದೆ ಎಂದು ಹೇಳಿದರು.
ಸಂಪುಟ ವಿಸ್ತರಣೆ ಆದ ನಂತರ ಕಾಂಗ್ರೆಸ್ಸಿನಲ್ಲಿ ಭಿನ್ನಮತ ಭುಗಿಲೇಳುವ ಸಾಧ್ಯತೆ ಇದೆ. ಸಚಿವ ಸಂಪುಟಕ್ಕೆ ಅಪೇಕ್ಷಿತರು ಬಹಳಷ್ಟು ಮಂದಿ ಇದ್ದಾರೆ. ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದು ಸಾಕಷ್ಟು ಪರಿಣಾಮ ಬೀರಲಿದೆ. ಇಂದು ಸಾಯಂಕಾಲದವರೆಗೆ ಸಾಕಷ್ಟು ಬದಲಾವಣೆ ಆಗಲಿದೆ. ಇಂದು ಪ್ರಮಾಣ ವಚನ ಆಗುವುದು ಸಂಶಯವಾಗಿದೆ. ಏಕೆಂದರೆ ಇಂದು ರಾಜ್ಯಪಾಲರು ಊರಲ್ಲಿ ಇಲ್ಲ ಎಂಬ ಸುದ್ದಿ ಇದೆ. ಆದರೆ ಈ ಬಗ್ಗೆ ನನಗೆ ಗೊತ್ತಿಲ್ಲ. ಸಂಜೆಯವರೆಗೆ ಏನಾಗುತ್ತೆ ಕಾದು ನೋಡೋಣ ಎಂದು ಹೇಳಿದರು.
ನಾವು 104 ಜನ ವಿರೋಧ ಪಕ್ಷದಲ್ಲಿದ್ದು, ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಏನು ಪರಿಣಾಮ ಆಗುತ್ತದೆ ಕಾದು ನೋಡುತ್ತೇವೆ. ನಂತರ ನಾನು ಬಿಜೆಪಿ ಶಾಸಕಾಂಗ ಸಭೆ ಕರೆಯುತ್ತೇನೆ. ಹೈಕಮಾಂಡ್ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದ್ರು.
ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ದೋಷ ಎತ್ತಿ ತೋರಿಸಿದ್ದೇವೆ. ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ಕಬ್ಬು ಬೆಳೆಗಾರರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಏನೂ ಮಾಡಿಲ್ಲ. ಬರಗಾಲದ ಬಗ್ಗೆ ವ್ಯಾಪಕ ಚರ್ಚೆ ಮಾಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬರಗಾಲ ಅಧ್ಯಯನ ಪ್ರವಾಸ ಮಾಡುತ್ತೇನೆ. ಸರ್ಕಾರ ಕೊಟ್ಟ ಅಂಕಿ ಅಂಶ ತಪ್ಪು ಎಂದು ಸಾಬೀತು ಮಾಡುತ್ತೇನೆ ಎಂದು ಯಡಿಯೂರಪ್ಪ ಸಮ್ಮಿಶ್ರ ಸರ್ಕಾರದ ಬಗ್ಗೆ ಕಿಡಿ ಕಾರಿದ್ದಾರೆ.
Keep Watching Us On KZbin At: / publictvnewskannada
Watch More From This Playlist Here: / publictvnewskannada
Read detailed news at www.publictv.in
Subscribe on KZbin: www.youtube.co...
Follow us on Google+ @ plus.google.co...
Like us @ / publictv
Follow us on twitter @ / publictvnews
--------------------------------------------------------------------------------------------------------
Public TV brings to you the latest updates from all walks of life, be it politics or entertainment, religion or sports, crime or any other thing. Keep watching...

Пікірлер
Tuna 🍣 ​⁠@patrickzeinali ​⁠@ChefRush
00:48
albert_cancook
Рет қаралды 103 МЛН
Quilt Challenge, No Skills, Just Luck#Funnyfamily #Partygames #Funny
00:32
Family Games Media
Рет қаралды 53 МЛН
LAVROV's interview with Tucker CARLSON 😁 [Parody]
8:34
Юрий ВЕЛИКИЙ
Рет қаралды 273 М.
Chkravarthy Sulibele's answer to a muslim in a seminar
12:17
Chintane ಚಿಂತನೆ
Рет қаралды 1,9 МЛН