Рет қаралды 6,080
ಹತ್ತು ವರ್ಷಗಳ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಗೆ ಚುನಾವಣೆ ನಡಯುತ್ತಿದೆ. ಆರ್ಟಿಕಲ್ 370 ವಿಧಿ ರದ್ದಾದ ಬಳಿಕ ಮೊದಲ ಬಾರಿ ಜನರು ಮತಗಟ್ಟಗೆ ಬಂದು ಮತದಾನ ಮಾಡಿದರು. ಒಟ್ಟು ಮೂರು ಹಂತದಲ್ಲಿ ಮತದಾನ ನಡೆಯಲಿದ್ದು, ಸೆಪ್ಟಂಬರ್ 18 ರಂದು ಮೊದಲ ಹಂತದಾನ ಮತದಾನ ಆರಂಭವಾಗಿದೆ. ಮುಂದೆ ಸೆಪ್ಟಂಬರ್ 25 ಹಾಗೂ ಅಕ್ಟೋಬರ್ 1ರಂದು ಮೂರನೇ ಹಂತದ ಮತದಾನ ನಯಲಿದೆ. ಮೊದಲ ಹಂತದಲ್ಲಿ ಒಟ್ಟು 24 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದ್ದು ಎರಡನೇ ಹಂತದಲ್ಲಿ 26 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 1ರಂದು ಒಟ್ಟು 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಪ್ರಧಾನಿ ಮೋದಿಯವರು ಕೂಡ ಯುವಕರನ್ನು ಉದ್ದೇಶಿಸಿ ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದ್ದಾರೆ.